"AWR Kannada, ಕನ್ನಡ, Canarese, Kanarese"

ms@ ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.

ms@ ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನ ಪಡಿಸಿಕೊಳ್ಳಿರಿ;

ms@ ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ.

ms@ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ,

ms@ ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.

ms@ ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.

ms@ ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ

ms@ ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು

ms@ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ

ms@ ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ

ms@ ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು?

ms@ ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.

ms@ ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.

ms@ ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ?

ms@ ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.

ms@ ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.

ms@ ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.

ms@ ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.

ms@ ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ms@ ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.

ms@ ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

ms@ ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.

ms@ ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.

ms@ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.

ms@ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ.

ms@ ಸೈತಾನ, ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ.

ms@ ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.

ms@ ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.

ms@ ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

ms@ ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.

ms@ ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.

ms@ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.

ms@ ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.

ms@ ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.

ms@ ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.

ms@ ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ.

ms@ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು

ms@ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.

ms@ ನ್ಯಾಯಪ್ರಮಾಣವು ಪರಿಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ, ನ್ಯಾಯವೂ, ಹಿತವೂ, ಆಗಿರುವಂಥದ್ದು ಸರಿ.

ms@ ಪರಿಶುದ್ಧರು ತಮ್ಮ ಎಲ್ಲಾ ದುಷ್ಟ ಮಾರ್ಗಗಳನ್ನು ತ್ಯಜಿಸಿ ನಂತರ ನಮ್ಮ ಎಲ್ಲಾ ಪ್ರಕರಣಗಳನ್ನು ಕ್ರಿಸ್ತನ ಕೈಗೆ ಒಪ್ಪಿಸಿ ಕೊಡಬೇಕು

ms@ ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.