I've never seen anyone's life get better by complaining about reality, I've seen it get better by accepting reality as it is and then making personal decisions to make it better. I’m passionate about helping people make a positive impact in other people’s lives. And purpose is to build strong nation in healthy spiritual and of a sound mind and changing lives.
ಕೀರ್ತನೆಗಳು 62:11 ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.
ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು
ಆದಿಕಾಂಡ 15:1 ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.
ಚೀಯೋನ್ ನಗರಿಯಾದರೋ - ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನಲ್ಲಾ ಅಂದುಕೊಂಡಳು.
ಕೀರ್ತನೆ 121:1 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು? 2 ಭೂಮ್ಯಾಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ ನನ್ನ ಸಹಾಯವು ಬರುತ್ತದೆ.
ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್‍ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು.
1 ಪೇತ್ರನು 2:21 ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.
ಅರಣ್ಯಕಾಂಡ 21:8 ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ - ನೀನು [ತಾಮ್ರದಿಂದ] ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು; ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು ಎಂದು ಆಜ್ಞಾಪಿಸಿದನು.
2 ಪೂರ್ವಕಾಲವೃತ್ತಾಂತ 20:12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.
ಯೋನ. 2:4 ನಿನ್ನ ಸಾನ್ನಿಧ್ಯದಿಂದ ಬಿಸಾಡಲ್ಪಟ್ಟಿದ್ದೇನೆ ಅಂದುಕೊಂಡೆನು; ಆದರೂ ನಿನ್ನ ಪರಿಶುದ್ಧಾಲಯವನ್ನು ಪುನಃ ದರ್ಶನಮಾಡುವೆನು.
ಕೀರ್ತನೆಗಳು 123:1 ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.
ಕೀರ್ತ.32:8 [ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ].
ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಲಜ್ಜೆಯಿಂದ ಕೆಡುವದೇ ಇಲ್ಲ.
ಯೆಹೋವನ ಎಲ್ಲಾ ಶತ್ರುಗಳೂ ಇವರಂತೆಯೇ ನಾಶವಾಗಲಿ; ಆತನ ಭಕ್ತರು ಪ್ರತಾಪದಿಂದ ಉದಯಿಸುವ ಸೂರ್ಯನಂತಿರಲಿ. ದೇಶದಲ್ಲಿ ನಾಲ್ವತ್ತು ವರುಷ ಸಮಾಧಾನವಿತ್ತು.
ಎದುರಿಗಿದ್ದ ನೀರು ಇವರ ದೃಷ್ಟಿಗೆ ಬಿದ್ದಿತು. ಸೂರ್ಯ ಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿದ್ದದರಿಂದ ಇವರು -
ಹಗಲಲ್ಲಿ ಸೂರ್ಯನೂ ಇರುಳಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.
ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಅವನು ತೊಡೆಯ ನಿವಿುತ್ತ ಕುಂಟಿಕೊಂಡು ನಡೆದನು.
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;
ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಲಿ ಅಂದನು.
ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?
WHO HAS DOMINION OVER YOUR LIFE Are you tired, worn down, discouraged by the battles you face? Stop facing them alone! You were never meant to fight without Me, without My power. Let Me be your God in this and every battle. Give Me dominion so I can make things right.
https://youtu.be/7CQn4Ktxa04 https://youtu.be/LfHq3_hDmrQ https://youtu.be/FtDZXbx6aXM ಯೆರೂಸಲೇಮಿಗೆ ಮೂಡಲಲ್ಲಿ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು ಆ ಗುಡ್ಡವು ಮೂಡಲಿಂದ ಪಡುವಲಿಗೆ ಉದ್ದಕ್ಕೂ ಸೀಳಿಹೋಗಿ
Believe
ಆಗ ದೂತನು ಆ ಹೆಂಗಸರಿಗೆ - ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ಹುಡುಕುತ್ತೀರೆಂದು ಬಲ್ಲೆನು; ಆತನು ಇಲ್ಲಿ ಇಲ್ಲ; 6 ತಾನು ಹೇಳಿದಂತೆ ಎದ್ದಿದ್ದಾನೆ; ಬನ್ನಿ, ಆತನು ಮಲಗಿದ್ದ ಸ್ಥಳವನ್ನು ನೋಡಿರಿ; 7 ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ - ಸತ್ತವನು ಬದುಕಿದ್ದಾನೆ, ಆತನು ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ; ನಾನು ನಿಮಗೆ ಹೇಳಿದ್ದೇನೆ, ನೋಡಿರಿ ಎಂದು ಹೇಳಿದನು.
ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನುಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
ಆತನು ನಮ್ಮ ಅಪರಾಧಗಳನ್ನೆಲ್ಲಾ ಕ್ಷವಿುಸಿ ನಮ್ಮ ಮೇಲೆ ದೋಷಾರೋಪಣೆಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ಕೆಡಿಸಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. 2 ನನ್ನ ತಂದೆಯ ಮನೆಯಲ್ಲಿ ಬಹಳ ಬಿಡಾರಗಳು ಅವೆ; ಇಲ್ಲದಿದ್ದರೆ ನಿಮಗೆ ಹೇಳುತ್ತಿದ್ದೆನು; ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗುತ್ತೇನಲ್ಲಾ.
Jesus replied, "Blessed are you, Simon son of Jonah, for this was not revealed to you by flesh and blood, but by my Father in heaven.
ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.
ಯೋಸೇಫಕುಲದ ಗುಡಾರವನ್ನು ವರ್ಜಿಸಿ ಎಫ್ರಾಯೀಮ್ ಕುಲವನ್ನು ತ್ಯಜಿಸಿ 68 ಯೆಹೂದಕುಲವನ್ನೂ ತನ್ನ ಪ್ರಿಯ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು. 69 ಆತನು ತನ್ನ ಆಲಯವನ್ನು ಪರ್ವತದಂತೆಯೂ ತಾನು ಸ್ಥಾಪಿಸಿದ ಭೂವಿುಯಂತೆಯೂ ಶಾಶ್ವತವಾಗಿ ಕಟ್ಟಿದನು.
ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರವಿರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಆದುಕೊಂಡಿದ್ದಾನಲ್ಲ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.
ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?
ಆತನು ಹನ್ನೆರಡು ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ 15 ದೆವ್ವಗಳನ್ನು ಬಿಡಿಸುವ ಅಧಿಕಾರವುಳ್ಳವರಾಗಿ ಸುವಾರ್ತೆಯನ್ನು ಸಾರುವದಕ್ಕೆ ತಾನು ಅವರನ್ನು ಕಳುಹಿಸುವೆನೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇವಿುಸಿದನು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.
ಇದಲ್ಲದೆ ಅವನು ನ್ಯಾಯಾಸನದಲ್ಲಿ ಕೂತಿರುವಾಗ ಅವನ ಹೆಂಡತಿಯು - ನೀನು ಆ ಸತ್ಪುರುಷನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು ಎಂದು ಅವನ ಬಳಿಗೆ ಹೇಳಿ ಕಳುಹಿಸಿದಳು.
ಹೀಗಿರಲಾಗಿ ಅವರು ಕೂಡಿಬಂದ ಸಮಯದಲ್ಲಿ ಪಿಲಾತನು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ತಿಳಿದು - ನಿಮಗೆ ಯಾರನ್ನು ಬಿಟ್ಟುಕೊಡಬೇಕನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನೋ ಎಂದು ಅವರನ್ನು ಕೇಳಿದನು.
ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು. 3 ಆ ಕಾಲದಲ್ಲಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಕಾಯಫನೆಂಬ ಮಹಾಯಾಜಕನ ಮಠಕ್ಕೆ ಕೂಡಿಬಂದು 4 ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲಬೇಕೆಂಬದಾಗಿ ಆಲೋಚನೆಮಾಡಿಕೊಂಡರು.
(ಮತ್ತಾ. 21.4-9; ಮಾರ್ಕ. 11.7-10; ಲೂಕ. 19.35-38) 12 ಮರುದಿವಸ ಜಾತ್ರೆಗೆ ಬಂದಿದ್ದ ಜನಸಮೂಹವು ಯೇಸು ಯೆರೂಸಲೇವಿುಗೆ ಬರುತ್ತಾನೆಂದು ಕೇಳಿ ಖರ್ಜೂರದ ಗರಿಗಳನ್ನು ತಕ್ಕೊಂಡು 13 ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು -ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;ಇಸ್ರಾಯೇಲಿನ ಅರಸನಿಗೆ ಆಶೀರ್ವಾದಎಂದು ಆರ್ಭಟಿಸಿದರು. 14 ಮತ್ತು ಯೇಸು ಕತ್ತೆಮರಿಯನ್ನು ತರಿಸಿಕೊಂಡು ಅದರ ಮೇಲೆ ಕೂತುಕೊಂಡನು. ಇದರಿಂದ - 15 ಚೀಯೋನ್ ನಗರಿಯೇ, ಹೆದರಬೇಡ;ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆಎಂಬ ಶಾಸ್ತ್ರದ ಮಾತು ನೆರವೇರಿತು.
ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.
ತಾನು ವಾಗ್ದಾನಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿಶ್ರೇಷ್ಠವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.
ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.
ಅದಕ್ಕೆ ಯೆಹೋವನು - ನಾನೇ ನಿಮ್ಮ ಜೊತೆಯಲ್ಲಿ ಬಂದು ನಿಮಗೆ ವಿಶ್ರಾಂತಿಯನ್ನು ಉಂಟುಮಾಡುವೆನು ಅಂದನು.
ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;
ಆದಕಾರಣ ಆ ದಿನವಾದರೂ ಗಳಿಗೆಯಾದರೂ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.
ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವದಕ್ಕೆ ಆಸಕ್ತರಾಗಿರಿ.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ.
ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು. 34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿತು.
ಪ್ರಿಯರಾದ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.